alex Certify 50 ದಿನ ಪೂರೈಸಿದ ‘ಸರ್ಕಾರು ವಾರಿಪಾಟ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

50 ದಿನ ಪೂರೈಸಿದ ‘ಸರ್ಕಾರು ವಾರಿಪಾಟ’

ಪರಶುರಾಮ್ ನಿರ್ದೇಶನದ ಮಹೇಶ್ ಬಾಬು ನಟನೆಯ ಆಕ್ಷನ್ ಡ್ರಾಮಾ ಆಧಾರಿತ ‘ಸರ್ಕಾರು ವಾರಿಪಾಟ’ ಚಿತ್ರ ಮೇ 12ರಂದು ಬಿಡುಗಡೆ ಮಾಡಲಾಗಿತ್ತು ಈ ಸಿನಿಮಾ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುವ ಮೂಲಕ 50 ದಿನ ಪೂರೈಸಿದೆ. ಈ ಸಂತಸವನ್ನು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದೆ. ಮೈತ್ರಿ ಮೂವಿ ಮೇಕರ್ಸ್, 14 ರೀಲ್ ಪ್ಲಸ್, ಹಾಗೂ ಮಹೇಶ್ ಬಾಬು ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ನಿರ್ಮಾಣವಾದ ಈ ಚಿತ್ರದಲ್ಲಿ ಕೀರ್ತಿ ಸುರೇಶ್ ನಾಯಕಿಯಾಗಿ ಅಭಿನಯಿಸಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ಎಸ್ ತಮನ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡಿದ್ದು, ಎಲ್ಲಾ ಹಾಡುಗಳು ಸೂಪರ್ ಡೂಪರ್ ಹಿಟ್ ಆಗಿವೆ ವೆನಿಲ್ಲಾ ಕಿಶೋರ್, ಸುಬ್ಬರಾಜು, ಸೌಮ್ಯ ಮೆನನ್, ಅನಂತ್ ಬಾಬು, ಮಹೇಶ್ ಮಂಜ್ರೇಕರ್, ಸೇರಿದಂತೆ ಮೊದಲಾದ ಕಲಾವಿದರು ತೆರೆಹಂಚಿಕೊಂಡಿದ್ದಾರೆ. ಕೇವಲ ತೆಲುಗು ಭಾಷೆಯಲ್ಲಿ ರಿಲೀಸ್ ಆದ ಈ ಸಿನಿಮಾ 200 ಕೋಟಿ ಕಲೆಕ್ಷನ್ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...