ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಂದಿನಂತೆ ವಾಡಿಕೆಯ ವೈದ್ಯಕೀಯ ಪರೀಕ್ಷೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿರುವುದಾಗಿ ಆಪ್ತ ಮೂಲಗಳು ತಿಳಿಸಿವೆ.
ರಜನಿಕಾಂತ್ ಅವರು ಆರೋಗ್ಯವಾಗಿದ್ದಾರೆ ಮತ್ತು ಅವರು ತಪಾಸಣೆಗಾಗಿ ಮಾತ್ರ ಆಸ್ಪತ್ರೆಗೆ ಬಂದಿದ್ದಾರೆ ಎಂದು ಅವರ ಪತ್ನಿ ಲತಾ ಹೇಳಿದ್ದಾರೆ ಎಂಬುದಾಗಿ ತಮಿಳು ಸುದ್ದಿವಾಹಿನಿಗಳು ವರದಿ ಮಾಡಿವೆ.
ಲತಾ ರಜನಿಕಾಂತ್, ಮಗಳು ಐಶ್ವರ್ಯಾ ಧನುಷ್ ಮತ್ತು ಅವರ ಸೋದರ ಮಾವ ರವಿಚಂದರ್ ಸದ್ಯ ಆಸ್ಪತ್ರೆಯಲ್ಲಿದ್ದಾರೆ.
70 ವರ್ಷದ ನಟ ಕಳೆದ ವರ್ಷ ಡಿಸೆಂಬರ್ನಲ್ಲಿ ತೀವ್ರ ರಕ್ತದೊತ್ತಡ ಏರಿಳಿತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ರಜನಿಕಾಂತ್ ಅವರು ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಲು ನಾಲ್ಕು ದಿನಗಳ ಹಿಂದಷ್ಟೇ ದೆಹಲಿಗೆ ತೆರಳಿದ್ದರು. ಹಾಗೂ ಅವರು ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.