alex Certify ಅಕ್ಟೋಬರ್ 20 ರಂದು ಬಿಡುಗಡೆಯಾಗಲಿದೆ ‘supplier ಶಂಕರ’ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್ 20 ರಂದು ಬಿಡುಗಡೆಯಾಗಲಿದೆ ‘supplier ಶಂಕರ’ ಟೀಸರ್

ರಂಜಿತ್ ಸಿಂಗ್ ರಜಪೂತ್ ನಿರ್ದೇಶಿಸಿರುವ ‘supplier ಶಂಕರ’ ಚಿತ್ರದ ಟೀಸರ್ ಇದೇ ತಿಂಗಳು ಅಕ್ಟೋಬರ್ 20ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ತ್ರಿನೇತ್ರ ಫಿಲಂಸ್ ಬ್ಯಾನರ್ ನಡಿ ಎಂ ಚಂದ್ರಶೇಖರ್ ಮತ್ತು ನಾಗೇಂದ್ರ ಸಿಂಗ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ನಿಶ್ಚಿತ್ ಕೊರೋಡಿ ಮತ್ತು ದೀಪಿಕಾ ಆರಾಧ್ಯ ನಾಯಕ – ನಾಯಕಿಯಾಗಿದ್ದಾರೆ.

ಗೋಪಾಲಕೃಷ್ಣ ದೇಶಪಾಂಡೆ ಸೇರಿದಂತೆ ನವೀನ್ ಡಿ, ಜ್ಯೋತಿ ರಾಯ್, ವಿಜಯ್ ವಿಶ್ವನಾಥ್ ತೆರೆ ಹಂಚಿಕೊಂಡಿದ್ದಾರೆ. ಸತೀಶ್ ಕುಮಾರ್ ಛಾಯಾಗ್ರಹಣವಿದ್ದು ಭರತ್ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...