ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಉಂಡೆ ಕೊಬ್ಬರಿಯನ್ನು ಪ್ರತಿ ಕ್ವಿಂಟಲ್ ಗೆ 12,000 ರೂ. ದರದಲ್ಲಿ ಖರೀದಿ ಮಾಡಲಾಗುವುದು.
ನಾಫೆಡ್ ಮತ್ತು ರಾಜ್ಯ ಸಹಕಾರ ಮಹಾಮಂಡಳ ವತಿಯಿಂದ ಮಾರ್ಚ್ 4 ರಿಂದ ಕೊಬ್ಬರಿ ಖರೀದಿಗೆ ರೈತರ ನೋಂದಣಿ ಆರಂಭವಾಗಲಿದೆ. 45 ದಿನಗಳವರೆಗೆ ರೈತರು ಕೊಬ್ಬರಿ ಖರೀದಿಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ 13 ಜಿಲ್ಲಾ ಕೇಂದ್ರಗಳಲ್ಲಿ ಕೊಬ್ಬರಿ ಖರೀದಿ ಅವಕಾಶವಿದ್ದು, ರೈತರು ನೋಂದಾಯಿಸಿಕೊಳ್ಳಬಹುದಾಗಿದೆ.