ಐತಿಹಾಸಿಕ ತೀರ್ಪೊಂದರಲ್ಲಿ, ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್ಡಿಎ) ಪರೀಕ್ಷೆಗಳನ್ನು ತೆಗೆದುಕೊಳ್ಳಲು ಮಹಿಳೆಯರಿಗೂ ಅವಕಾಶ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಈ ವರ್ಷದ ಸೆಪ್ಟೆಂಬರ್ 5ರಂದು ಹಮ್ಮಿಕೊಳ್ಳಲಿರುವ ಎನ್ಡಿಎ ಪರೀಕ್ಷೆಯಲ್ಲಿ ಮಹಿಳೆಯರಿಗೂ ಅವಕಾಶ ನೀಡಬೇಕೆಂದು ಆದೇಶಿಸಿದ ಸುಪ್ರೀಂ, ಅನುಮತಿಗಳು ತನ್ನ ಅಂತಿಮ ಆದೇಶದಂತೆ ಸಾಗಬೇಕು ಎಂದಿದೆ.
ಎನ್ಡಿಎ ಪರೀಕ್ಷೆಗಳಲ್ಲಿ ಮಹಿಳೆಯರಿಗೆ ಅವಕಾಶ ಕೊಡದೇ ಇರುವ ವಿಚಾರವಾಗಿ ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.