ನ್ಯಾಯ ಮಂಡಳಿ ಸುಧಾರಣಾ ಕಾಯ್ದೆ ಮತ್ತು ನೇಮಕಾತಿ ವಿಳಂಬದ ಬಗ್ಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಸರ್ಕಾರದ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮಂಡಳಿಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ವಿಳಂಬದ ಬಗ್ಗೆ ಸರ್ಕಾರ, ನ್ಯಾಯಾಲಯದ ನಿರ್ಧಾರಗಳನ್ನು ಗೌರವಿಸಲು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ನ್ಯಾಯಮೂರ್ತಿ ಎನ್.ವಿ.ರಮಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನ್ಯಾಯಮಂಡಳಿ ಸುಧಾರಣಾ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ಮೇಲೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದ್ರ ವಿಚಾರಣೆ ನಡೆಸಿದ ನಂತ್ರ, ಮುಂದಿನ ಸೋಮವಾರದೊಳಗೆ ನೇಮಕಾತಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.
ನ್ಯಾಯಾಧೀಶರ ನಿರ್ಧಾರವನ್ನು ಸರ್ಕಾರ ಗೌರವಿಸುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ. ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಾಧೀಶರನ್ನು ಕೇಂದ್ರ ಸರ್ಕಾರ ನಂಬುತ್ತಿಲ್ಲವೆಂದಾದ್ರೆ ನಮ್ಮ ಬಳಿ ಬೇರೆ ಆಯ್ಕೆಯಿಲ್ಲವೆಂದು ನ್ಯಾಯಪೀಠ ಹೇಳಿದೆ. ನ್ಯಾಯಾಧೀಶರ ನೇಮಕದ ರೀತಿ ನಮಗೆ ಸಂತೋಷ ನೀಡಿದೆ. ಆದ್ರೆ ಅಧ್ಯಕ್ಷರು ಸೇರಿದಂತೆ ಸದಸ್ಯರ ನೇಮಕದಲ್ಲಿ ವಿಳಂಬವಾಗ್ತಿದೆ ಎಂದು ಕೋರ್ಟ್ ಹೇಳಿದೆ.