ಬೆಂಗಳೂರು: ಮೀಸಲಾತಿ ಹೆಚ್ಚಳ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮೀಸಲಾತಿ ಏರಿಕೆಗೆ ಸಂಪುಟ ಸಭೆಯಲ್ಲಿ ಸಹಮತ ವ್ಯಕ್ತವಾಗಿದ್ದು, ಶೇಕಡ 50 ಮಿತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಾಗಿದೆ.
ಮೀಸಲಾತಿ ಮಿತಿಯಿಂದ ವಿನಾಯಿತಿ ಕೋರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಸುಪ್ರೀಂಕೋರ್ಟ್ ನಲ್ಲಿ ಮರಾಠಿ ಮೀಸಲಾತಿ ಕುರಿತಂತೆ ನಡೆಯುತ್ತಿರುವ ಪ್ರಕರಣದಲ್ಲಿ ಎಲ್ಲ ರಾಜ್ಯಗಳ ಅಭಿಪ್ರಾಯ ಕೇಳಿದ್ದು, ಕರ್ನಾಟಕ ಈಗಿರುವ ಮೀಸಲಾತಿ ಪ್ರಮಾಣ ಏರಿಕೆ ಮಾಡುವ ಬಗ್ಗೆ ಪ್ರಮಾಣಪತ್ರ ಸಲ್ಲಿಸಿದೆ.
ರಾಜ್ಯದಲ್ಲಿ ವಿವಿಧ ಸಮುದಾಯಗಳಿಂದ ಮೀಸಲಾತಿಗಾಗಿ ಒತ್ತಡವಿದೆ. ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಗೆ ಮೀಸಲಾತಿ ಮಿತಿ ಹೆಚ್ಚಳಕ್ಕೆ ಪ್ರಮಾಣಪತ್ರ ಸಲ್ಲಿಸಲಾಗಿದೆ.