ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿ ಗಡಿಭಾಗದಲ್ಲಿ ನಿರಂತರ ಹೋರಾಟ ಕೈಗೊಂಡಿದ್ದಾರೆ. ಈ ಬಗ್ಗೆ ಮಧ್ಯಪ್ರವೇಶಿಸಿದ ಸುಪ್ರೀಂಕೋರ್ಟ್ ಮೂರು ಕೃಷಿ ಕಾಯ್ದೆ ಜಾರಿ ಸದ್ಯಕ್ಕೆ ತಡೆಯಿರಿ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.
ಕೃಷಿ ತಜ್ಞರು, ರೈತ ಪ್ರತಿನಿಧಿಗಳನ್ನೊಳಗೊಂಡ ಸ್ವತಂತ್ರ ಸಮಿತಿ ರಚಿಸುವ ಚಿಂತನೆ ನಡೆಸಿರುವುದಾಗಿ ಹೇಳಲಾಗಿದೆ. ರೈತರಿಗೆ ಪ್ರತಿಭಟನೆ ನಡೆಸುವ ಹಕ್ಕು ಇದೆ. ಆದರೆ, ಇದರಿಂದ ಬೇರೆಯವರಿಗೆ ತೊಂದರೆಯಾಗಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಕಳೆದ 23 ದಿನಗಳಿಂದ ರೈತರು ನಡೆಸುತ್ತಿರುವ ಹೋರಾಟಕ್ಕೆ ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು ಬಿಕ್ಕಟ್ಟು ಬಗೆಹರಿಸಲು ಸ್ವತಂತ್ರ ಸಮಿತಿ ರಚಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ತಿಳಿಸಿದೆ. ಸದ್ಯಕ್ಕೆ ಕೃಷಿ ಕಾಯ್ದೆ ಜಾರಿಯನ್ನು ತಡೆಯುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.