
ನವದೆಹಲಿ: ರಾಜ್ಯ ಸರ್ಕಾರ ಶಾಲಾ, ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಲು ನಿಷೇಧಿಸಿರುವ ಆದೇಶವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆಗೆ ಎತ್ತಿಕೊಳ್ಳಲಿದೆ.
ನೂತನ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರ ಕೆಲಸದ ಮೊದಲ ದಿನವಾದ ಸೋಮವಾರ ಹಿಜಾಬ್ ಧರಿಸಲು ನಿಷೇಧ ಆದೇಶ ಅರ್ಜಿಯ ವಿಚಾರಣೆ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ನ್ಯಾಯಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಸಲಾಗುವುದು.
ವಿದ್ಯಾರ್ಥಿಗಳ ನಂಬಿಕೆಯ ಆಚರಣೆಗೆ ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.