ನವದೆಹಲಿ: ಸುಪ್ರೀಂಕೋರ್ಟ್ ನ್ಯಾಯಾಧೀಶರಿಗೆ ಕೊವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳ ನಡುವೆ ಆಯ್ಕೆ ಮಾಡಿಕೊಳ್ಳಲು ಅವಕಾಶ ಇಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಮಂಗಳವಾರದಿಂದ ಸುಪ್ರೀಂಕೋರ್ಟ್ ನ್ಯಾಯಾಧೀಶರಿಗೆ ಚುಚ್ಚುಮದ್ದು ನೀಡಲಾಗುವುದು. ಕೊವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳ ನಡುವೆ ಆಯ್ಕೆ ಮಾಡಲು ಸುಪ್ರೀಂಕೋರ್ಟ್ ನ್ಯಾಯಾಧೀಶರಿಗೆ ಅವಕಾಶ ನೀಡುವುದಿಲ್ಲ ಎಂದು ಆರೋಗ್ಯ ಸಚಿವಾಲಯದ ಸೋಮವಾರ ಸ್ಪಷ್ಟಪಡಿಸಿದೆ.
ನ್ಯಾಯಾಧೀಶರು ಲಸಿಕೆಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ. ಕೋ -ವಿನ್ ವ್ಯವಸ್ಥೆಯ ಮೂಲಕವೇ ಲಸಿಕೆ ನೀಡಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇಂದಿನಿಂದ 60 ವರ್ಷ ಮೇಲ್ಪಟ್ಟವರು ಮತ್ತು 45 ವರ್ಷ ಮೇಲ್ಪಟ್ಟ ಆರೋಗ್ಯ ತೊಂದರೆ ಇರುವವರಿಗೆ ಲಸಿಕೆ ನೀಡಿಕೆ ಕಾರ್ಯ ಆರಂಭಿಸಲಾಗಿದೆ.