alex Certify ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಘಟಾನುಘಟಿ ವಕೀಲರಿಂದ ವಾದ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಘಟಾನುಘಟಿ ವಕೀಲರಿಂದ ವಾದ ಮಂಡನೆ

ನವದೆಹಲಿ: ಮಹಾರಾಷ್ಟ್ರ ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟಿನ ಕಾನೂನು ಸಮರ ಉಂಟಾಗಿದ್ದು, ಸುಪ್ರೀಂಕೋರ್ಟ್ನಲ್ಲಿ ಇಂದು ಘಟಾನುಘಟಿ ವಕೀಲರು ವಾದ ಮಂಡಿಸಲಿದ್ದಾರೆ. ಏಕನಾಥ ಶಿಂಧೆ ಬಣದ ಪರವಾಗಿ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಲಿದ್ದು, ಡೆಪ್ಯುಟಿ ಸ್ಪೀಕರ್ ಪರವಾಗಿ ಕಪಿಲ್ ಸಿಬಲ್ ವಾದ ಮಂಡಿಸುವವರು. ಮಹಾವಿಕಾಸ ಅಘಾಡಿ ಸರ್ಕಾರದ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ.

ಅನರ್ಹತೆ ನೋಟಿಸ್ ಪ್ರಶ್ನಿಸಿ ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆ ಬಣದ ಶಾಸಕರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ 10.30 ಕ್ಕೆ ಸುಪ್ರೀಂಕೋರ್ಟ್ ನಲ್ಲಿ ಅರ್ಜಿಗಳ ವಿಚಾರಣೆ ನಡೆಯಲಿದೆ.

ಏಕನಾಥ ಶಿಂಧೆ ಬಣದಿಂದ ಎರಡು ಅರ್ಜಿಗಳನ್ನು ಸಲ್ಲಿಸಲಾಗಿದೆ. ಏಕನಾಥ ಶಿಂಧೆ ಮತ್ತು ಭರತ್ ಗೊರವಾಲೆ ಅವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಉಪಸ್ಪೀಕರ್ ನೋಟಿಸ್ ನೀಡಿರುವುದನ್ನು ಶಿಂಧೆ ಬಣ ಪ್ರಶ್ನಿಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಅಜಯ್ ಚೌಧರಿ ಅವರನ್ನು ಉದ್ಧವ್ ಠಾಕ್ರೆ ಬಣ ನೇಮಕ ಮಾಡಲಾಗಿದೆ. ಏಕನಾಥ ಶಿಂಧೆ ಅವರ ಜಾಗಕ್ಕೆ ಅಜಯ್ ಚೌಧರಿ ಅವರನ್ನು ನೇಮಕ ಮಾಡಲಾಗಿದ್ದು, ಇದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ.

ಏಕನಾಥ ಶಿಂಧೆ ಬಣ ಸಲ್ಲಿಸಿದ ಅರ್ಜಿಗಳ ವಿಚಾರಣೆ ಇಂದು ಬೆಳಗ್ಗೆ 10.30 ಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದ್ದು, ಏಕನಾಥ ಶಿಂಧೆ ಅವರ ಪರವಾಗಿ ಹಿರಿಯ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಲಿದ್ದಾರೆ. ಭಾರತದ ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ ಶಿಂಧೆ ಪರವಾಗಿ ವಾದ ಮಂಡಿಸಲಿದ್ದು, ಶಿವಸೇನೆ ಪಕ್ಷದ ಪರವಾಗಿ ಖ್ಯಾತ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಉಪ ಸ್ಪೀಕರ್ ಪರವಾಗಿ ಕಪಿಲ್ ಸಿಬಲ್ ವಾದ ಮಂಡಿಸಲಿದ್ದಾರೆ. 2018ರ ಕರ್ನಾಟಕ ಸರ್ಕಾರ ರಚನೆ ಸಂದರ್ಭದಲ್ಲಿಯೂ ಅಭಿಷೇಕ್ ಮನು ಸಿಂಘ್ವಿ ಕಾಂಗ್ರೆಸ್ ಪರವಾಗಿ ವಾದ ಮಂಡಿಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...