ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ -ಯುಜಿ ಸೆಪ್ಟೆಂಬರ್ 12 ರಂದು ನಿಗದಿಯಂತೆ ನಡೆಯಲಿದೆ. ನೀಟ್ -ಯುಜಿ ಪರೀಕ್ಷೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಸೆಪ್ಟೆಂಬರ್ 12ರಂದು ಹಲವು ಪರೀಕ್ಷೆಗಳು ನಿಗದಿಯಾಗಿರುವ ಹಿನ್ನೆಲೆಯಲ್ಲಿ ನೀಟ್ ಪರೀಕ್ಷೆ ಮುಂದೂಡಬೇಕೆಂದು ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ನ್ಯಾಯಪೀಠ ತಿರಸ್ಕರಿಸಿದೆ. ಈ ಮೂಲಕ ಪರೀಕ್ಷೆ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಅದನ್ನು ಮರು ನಿಗದಿಪಡಿಸುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದ್ದು, ವಿದ್ಯಾರ್ಥಿಗಳು ಆದ್ಯತೆಯ ಮೇರೆಗೆ ಒಂದು ಪರೀಕ್ಷೆ ಆಯ್ಕೆ ಮಾಡಿಕೊಳ್ಳಲಿ ಎಂದು ಹೇಳಲಾಗಿದೆ.