ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶದಲ್ಲಿ 2ನೇ ಹಂತದ ಹಾಗೂ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಈ ನಡುವೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮಹತ್ವದ ನೋಟಿಸ್ ನೀಡಿದೆ.
ನೋಟಾಗೆ ಹೆಚ್ಚು ಮತಬಂದರೆ ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಹೊಸದಾಗಿ ಮರುಚುನಾವಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನೋಟೀಸ್ ನೀಡಿದೆ.
ನೋಟಾಗೆ ಅತಿಹೆಚ್ಚು ಮತಬಂದರೆ ಮರುಚುನಾವಣೆ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿ ಗಣನೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ಒಂದು ವೇಳೆ ನೋಟಾಗೆ ಹೆಚ್ಚು ಮತಬಂದರೆ ಆ ಕ್ಷೇತ್ರದಲ್ಲಿ ಮರುಚುನಾವಣೆ ನಡೆಸಬೇಕು. ನೋತಾಗಿಂತ ಕಡಿಮೆ ಮತಪಡೆದ ಅಭ್ಯರ್ಥಿಯನ್ನು ಮರುಚುನಾವಣೆಗೆ ನಿಷೇಧಿಸಬೇಕು. ಚುನಾವಣೆಗೆ ಸ್ಪರ್ಧೆ ಮಾಡದಂತೆ ಸೂಚಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು.