alex Certify BIG NEWS: ʼದಿ ಕೇರಳ ಸ್ಟೋರಿʼ ಪ್ರದರ್ಶನಕ್ಕೆ ನಿರ್ಬಂಧ; ಪಶ್ಚಿಮ ಬಂಗಾಳ, ತಮಿಳುನಾಡಿಗೆ ʼಸುಪ್ರೀಂʼ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ʼದಿ ಕೇರಳ ಸ್ಟೋರಿʼ ಪ್ರದರ್ಶನಕ್ಕೆ ನಿರ್ಬಂಧ; ಪಶ್ಚಿಮ ಬಂಗಾಳ, ತಮಿಳುನಾಡಿಗೆ ʼಸುಪ್ರೀಂʼ ನೋಟಿಸ್

ದಿ ಕೇರಳ ಸ್ಟೋರಿ ಸಿನಿಮಾ ತೆರೆಕಾಣದಂತೆ ತಡೆಹಿಡಿದಿರುವ ಪಶ್ಚಿಮ ಬಂಗಾಳ ಮತ್ತು ತಮಿಳು ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಎರಡೂ ರಾಜ್ಯಗಳಿಗೆ ನೋಟಿಸ್ ನೀಡಿದೆ.

‘ದಿ ಕೇರಳ ಸ್ಟೋರಿ’ ಸಿನಿಮಾ ದೇಶಾದ್ಯಂತ ಯಾವುದೇ ಸಮಸ್ಯೆಯಿಲ್ಲದೆ ಪ್ರದರ್ಶನಗೊಳ್ಳುತ್ತಿರುವಾಗ ಪಶ್ಚಿಮ ಬಂಗಾಳದಲ್ಲಿ ನಿಷೇಧ ಹೇರಿರುವುದರ ಹಿಂದಿನ ತಾರ್ಕಿಕತೆಯನ್ನು ಸುಪ್ರೀಂ ಕೋರ್ಟ್ ಕೇಳಿದೆ.

“ಪಶ್ಚಿಮ ಬಂಗಾಳ ಚಲನಚಿತ್ರವನ್ನು ಏಕೆ ನಿಷೇಧಿಸಬೇಕು? ಇದೇ ರೀತಿಯ ಜನಸಂಖ್ಯಾ ಸಂಯೋಜನೆಯನ್ನು ಹೊಂದಿರುವ ರಾಜ್ಯಗಳು ಸೇರಿದಂತೆ ದೇಶದ ಇತರ ಭಾಗಗಳಲ್ಲಿ ಚಿತ್ರ ಪ್ರದರ್ಶನವಾಗ್ತಿದೆ. ಮತ್ತು ಅಲ್ಲಿ ಏನೂ ಸಂಭವಿಸಿಲ್ಲ. ಇದಕ್ಕೂ ಚಿತ್ರದ ಕಲಾತ್ಮಕ ಮೌಲ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿಗಳ ಪೀಠವು ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠವು ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿಗೆ ನೋಟಿಸ್ ಜಾರಿ ಮಾಡಿದೆ.

ತಮಿಳುನಾಡಿನಲ್ಲಿ ಚಲನಚಿತ್ರವನ್ನು ನಿಷೇಧಿಸಲಾಗಿಲ್ಲವಾದರೂ, ಕಾನೂನು ಮತ್ತು ಸುವ್ಯವಸ್ಥೆಯ ಕಾಳಜಿಯಿಂದ ಚಿತ್ರ ಪ್ರದರ್ಶಿಸದಿರಲು ಥಿಯೇಟರ್ ಮಾಲೀಕರು ನಿರ್ಧರಿಸಿದ್ದಾರೆ. ಆದರೆ ಚಿತ್ರ ನಿರ್ಮಾಪಕರು ನಿಷೇಧ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಸಿನಿಮಾ ಬಿಡುಗಡೆಯಾದರೆ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯಾಗಬಹುದೆಂದು ಗುಪ್ತಚರ ದಳ ಮಾಹಿತಿ ನೀಡಿತ್ತು ಎಂದು ತಿಳಿಸಿದರು.

ತಮಿಳುನಾಡಿನಲ್ಲಿ ಚಿತ್ರ ಪ್ರದರ್ಶಿಸುವ ಥಿಯೇಟರ್‌ಗಳಿಗೆ ಭದ್ರತೆ ಒದಗಿಸಿರುವ ಬಗ್ಗೆಯೂ ನ್ಯಾಯಾಲಯ ಕೇಳಿದೆ. ಮುಂದಿನ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಲಾಗಿದೆ.

ಕೇರಳದಲ್ಲಿ ಮಹಿಳೆಯರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲಾಗಿದೆ ಮತ್ತು ಅವರು ಐಸಿಸ್‌ಗೆ ಸೇರಿದ್ದಾರೆ ಎಂಬ ಚಿತ್ರಕಥೆಯನ್ನೊಳಗೊಂಡಿರುವ ದಿ ಕೇರಳ ಸ್ಟೋರಿ ಸಿನಿಮಾ ಸಾಕಷ್ಟು ವಿವಾದ ಹುಟ್ಟುಹಾಕಿದೆ.

ಸುದೀಪ್ತೋ ಸೇನ್ ನಿರ್ದೇಶನವ ‘ದಿ ಕೇರಳ ಸ್ಟೋರಿ’ಯನ್ನು ನಿಷೇಧಿಸಿದ ಮೊದಲ ರಾಜ್ಯ ಪಶ್ಚಿಮ ಬಂಗಾಳ. ಚಿತ್ರದ ನಿರ್ಮಾಪಕರು ಬಂಗಾಳದ ನಿಷೇಧವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...