alex Certify BIG NEWS: ಭೂ ಪರಿಹಾರ ವಿಳಂಬವಾದಲ್ಲಿ ಹಾಲಿ ದರದಲ್ಲೇ ಪರಿಹಾರ: ಸುಪ್ರೀಂ ಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೂ ಪರಿಹಾರ ವಿಳಂಬವಾದಲ್ಲಿ ಹಾಲಿ ದರದಲ್ಲೇ ಪರಿಹಾರ: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಭೂ ಪರಿಹಾರ ವಿಳಂಬವಾದರೆ ಹಾಲಿ ದರದಲ್ಲಿ ಪರಿಹಾರ ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

ಆಸ್ತಿ ಹಕ್ಕು ಎಂಬುದು ಸಂವಿಧಾನಾತ್ಮಕ ಹಕ್ಕಾಗಿದ್ದು, ಕಾನೂನು ಪ್ರಕಾರ ಸೂಕ್ತ ಪರಿಹಾರ ನೀಡದೆ ಯಾವುದೇ ವ್ಯಕ್ತಿ ತನ್ನ ಹಕ್ಕಿನಿಂದ ವಂಚಿತವಾಗಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಬೆಂಗಳೂರು -ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರಾಜೆಕ್ಟ್ ರಸ್ತೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಜಾಗ ಕಳೆದುಕೊಂಡವರ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

22 ವರ್ಷಗಳಷ್ಟು ಹಳೆಯದಾದ ಈ ಪ್ರಕರಣದಲ್ಲಿ 2019ರ ಏಪ್ರಿಲ್ ಮಾರುಕಟ್ಟೆ ದರದಂತೆ ಅರ್ಜಿದಾರರಿಗೆ ಪರಿಹಾರ ನೀಡುವಂತೆ ಸಂಬಂಧಿಸಿದ ಭೂ ಸ್ವಾಧೀನ ಅಧಿಕಾರಿಗಳಿಗೆ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣದಲ್ಲಿ ಸಂತ್ರಸ್ತರು 22 ವರ್ಷ ಕಾನೂನು ಹೋರಾಟ ನಡೆಸಿದ್ದಾರೆ. ಆದರೂ ಅವರಿಗೆ ಪರಿಹಾರ ವಿಳಂಬವಾಗಿದೆ. ಅಧಿಕಾರಿಗಳ ಜಡ ಮನಸ್ಥಿತಿಯೇ ಇದಕ್ಕೆ ಕಾರಣ ಎಂದು ಪರಿಹಾರ ವಿಳಂಬಕ್ಕೆ ತರಾಟೆಗೆ ತೆಗೆದುಕೊಂಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...