ವಿಕಲಚೇತನರೂ ಸಹ ಐಪಿಎಸ್ (ಭಾರತೀಯ ಪೊಲೀಸ್ ಸೇವೆ), ಐಆರ್‌ಪಿಎಫ್‌ಎಸ್ (ಭಾರತೀಯ ರೈಲ್ವೆ ಭದ್ರತಾ ಪಡೆ), ಡಿಎಎನ್‌ಐಪಿಎಸ್ (ದೆಹಲಿ, ಅಂಡಮಾನ್ ಮತ್ತು ನಿಕೋಬಾರ್ ಐಲೆಂಡ್ ಪೊಲೀಸ್ ಸೇವೆ)ಗೆ ಯುಪಿಎಸ್ಸಿಗೆ ಅರ್ಜಿ ಸಲ್ಲಿಸಲು ಸುಪ್ರಿಂಕೋರ್ಟ್ ಅವಕಾಶ ನೀಡಿದೆ. ಕೇಂದ್ರದ ಆಗಸ್ಟ್ 18, 2021 ರ ಅಧಿಸೂಚನೆಯನ್ನು ಪ್ರಶ್ನಿಸುವ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.
ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ಎ.ಎಸ್. ಓಕಾ ಅವರ ಪೀಠಕ್ಕೆ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಈ ವಿಷಯದಲ್ಲಿ ಪ್ರತಿ ಅಫಿಡವಿಟ್ ಸಲ್ಲಿಸಲು ಸರ್ಕಾರವು ಸಮಯ ಬಯಸುತ್ತದೆ ಎಂದು ತಿಳಿಸಿದರು. ಅಫಿಡವಿಟ್ ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ಬೇಕಾಗುತ್ತದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪೀಠಕ್ಕೆ ತಿಳಿಸಿದರು.
ಬಾಕ್ಸ್ ಆಫೀಸ್ ಧೂಳೀಪಟ, ಹೊಸ ದಾಖಲೆ ಬರೆದ ‘RRR ‘
ಈ ವಿನಂತಿ ನ್ಯಾಯಸಮ್ಮತ ಮತ್ತು ಸಮಂಜಸವಾಗಿದೆ ಎಂಬುದನ್ನು ನಾವು ಕಂಡುಕೊಂಡಿದ್ದೇವೆ. ಅದರ ಪ್ರಕಾರ, ಏಪ್ರಿಲ್ 1, 2022 ರಂದು ಅಥವಾ ಅದಕ್ಕೂ ಮೊದಲು ಪ್ರಧಾನ ಕಾರ್ಯದರ್ಶಿ, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಅವರ ಕಚೇರಿಯಲ್ಲಿ ಸಂಜೆ 4 ಗಂಟೆಯ ಮೊದಲು ಅರ್ಜಿ ಸಲ್ಲಿಸಬಹುದು ಎಂದು ಪೀಠ ಹೇಳಿದೆ.
ಈಗ ನಡೆಯುತ್ತಿರುವ ಆಯ್ಕೆ ಪ್ರಕ್ರಿಯೆಯನ್ನು ಯಾವುದೇ ರೀತಿಯಲ್ಲಿ ತಡೆಯಬಾರದು ಎಂದು ತನ್ನ ಆದೇಶದಲ್ಲಿ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಪೀಠವು ಏಪ್ರಿಲ್ 18ರಂದು ವಿಚಾರಣೆಯನ್ನು ಮುಂದೂಡಿದೆ.