alex Certify ಖಾಸಗಿ ಶಾಲೆಗಳಿಗೆ ಬಿಗ್​ ರಿಲೀಫ್​: ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಶಾಲೆಗಳಿಗೆ ಬಿಗ್​ ರಿಲೀಫ್​: ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ

 ಕಳೆದ ವರ್ಷ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಾಕ್​​ಡೌನ್​ ಆದೇಶ ಅಂತ್ಯವಾದ ಬಳಿಕ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ವಾರ್ಷಿಕ ಹಾಗೂ ಅಭಿವೃದ್ಧಿ ಶುಲ್ಕಗಳನ್ನ ಪೋಷಕರಿಂದ ಸಂಗ್ರಹಿಸಲು ಅನುಮತಿ ನೀಡುವ ದೆಹಲಿ ಹೈಕೋರ್ಟ್​ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್​ ನಿರಾಕರಿಸಿದೆ. ಈ ಮೂಲಕ ದೆಹಲಿ ಖಾಸಗಿ ಶಾಲೆಗಳಿಗೆ ಬಿಗ್​ ರಿಲೀಫ್​ ಸಿಕ್ಕಂತಾಗಿದೆ.

ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶುಲ್ಕ ಸಂಗ್ರಹಣೆ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಅಧಿಕಾರ ಕೋರಿ ದೆಹಲಿ ಸರ್ಕಾರದ ಡೈರಕ್ಟೋರೇಟ್​ ಆಫ್​ ಎಜುಕೇಶನ್​ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್​, ದಿನೇಶ್​ ಮಾಹೇಶ್ವರಿ ಹಾಗೂ ಅನಿರುದ್ಧ ಬೋಸ್​​ ಹೈಕೋರ್ಟ್​ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.

ದೆಹಲಿ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ವಿಕಾಸ್​ ಸಿಂಗ್​, ದೆಹಲಿ ಹೈಕೋರ್ಟ್​ನ ನಿರ್ಧಾರದಿಂದ ಲಕ್ಷಗಟ್ಟಲೇ ಪೋಷಕರಿಗೆ ಆರ್ಥಿಕ ಹೊರೆ ಬೀಳಲಿದೆ ಎಂದು ಹೇಳಿದ್ದರು. ಪ್ರಸ್ತುತ ಸಂದರ್ಭ ಹಾಗೂ ಸತ್ಯಗಳನ್ನ ಪರಿಗಣಿಸಿದಾಗ ದೆಹಲಿ ಹೈಕೋರ್ಟ್ ನೀಡಿದ ಆದೇಶದಲ್ಲಿ ಮಧ್ಯ ಪ್ರವೇಶಿಸಲು ಸರ್ವೋಚ್ಛ ನ್ಯಾಯಲಯ ಒಲವು ತೋರುವುದಿಲ್ಲ ಎಂದು ಹೇಳಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...