alex Certify BIG NEWS: ಜು.31ರೊಳಗೆ ‘ಒನ್ ನೇಷನ್ – ಒನ್ ರೇಷನ್’ ಜಾರಿಗೆ ಸುಪ್ರೀಂ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜು.31ರೊಳಗೆ ‘ಒನ್ ನೇಷನ್ – ಒನ್ ರೇಷನ್’ ಜಾರಿಗೆ ಸುಪ್ರೀಂ ಸೂಚನೆ

ಜುಲೈ 31 ರೊಳಗೆ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆಯನ್ನು ಜಾರಿಗೆ ತರಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಅಸಂಘಟಿತ ವಲಯದ ಕಾರ್ಮಿಕರಿಗೆ ಅನುಕೂಲ ಮಾಡಿಕೊಡಲು ಎನ್‌ಐಸಿಯ ಸಹಾಯದಿಂದ ಜುಲೈ 31 ರೊಳಗೆ ಪೋರ್ಟಲ್ ಅಭಿವೃದ್ಧಿಪಡಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚನೆ ನೀಡಿದೆ.

ಕೋವಿಡ್ ಪರಿಸ್ಥಿತಿಯಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಆಹಾರ ಧಾನ್ಯ ವಿತರಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆಹಾರ ಧಾನ್ಯಗಳನ್ನು ಮಂಜೂರು ಮಾಡುವಂತೆ ಸುಪ್ರೀಂ ಕೋರ್ಟ್, ಕೇಂದ್ರಕ್ಕೆ ನಿರ್ದೇಶನ ನೀಡಿದೆ. ವಲಸೆ ಕಾರ್ಮಿಕರಿಗೆ ಪಡಿತರ ನೀಡುವ ಯೋಜನೆಯನ್ನು ರಾಜ್ಯ ಜಾರಿಗೆ ತರಬೇಕೆಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್. ಶಾ ಅವರ ನ್ಯಾಯಪೀಠ, ಮೂವರು ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆಸಿದೆ. ಆಹಾರ ಭದ್ರತೆ, ನಗದು ಮತ್ತು ಇತರ ಕಲ್ಯಾಣ ಯೋಜನೆಗಳನ್ನು ಖಾತ್ರಿಪಡಿಸಿಕೊಳ್ಳುವಂತೆ, ಕೇಂದ್ರ ಮತ್ತು ರಾಜ್ಯಗಳಿಗೆ ಕೋರ್ಟ್ ನಿರ್ದೇಶನ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...