
ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ಇಡೀ ದೇಶವನ್ನು ಬೆಚ್ಚಿಬೀಳಿಸಿದ ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಸ್ವೀಕರಿಸಿದೆ.
ಆಗಸ್ಟ್ 20 ರಂದು ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ತೆಗೆದುಕೊಂಡಿದೆ.
ಮಂಗಳವಾರ ವಿಚಾರಣೆಯನ್ನು ನಡೆಸಲಾಗುವುದು. ಸಿಜೆಐ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಮನೋಜ್ ಮಿಶ್ರಾ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ.
ಇಡೀ ದೇಶದಲ್ಲಿ ವೈದ್ಯರಿಗೆ ನ್ಯಾಯ ದೊರಕಿಸಿಕೊಡಬೇಕೆಂಬ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ನ ಈ ಕ್ರಮಕ್ಕೆ ಮುಂದಾಗಿದೆ.
