ನವದೆಹಲಿ: ರೈತರ ಸಮಸ್ಯೆಗಳಿಗೆ ಶಾಶ್ವತವಾಗಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ಬಹು ಸದಸ್ಯರ ಸಮಿತಿಯನ್ನು ಶೀಘ್ರದಲ್ಲೇ ರಚಿಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ದೀಪಂಕರ್ ದತ್ತಾ, ಉಜ್ವಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠದಲ್ಲಿ ರೈತರ ಸಮಸ್ಯೆಗಳ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಲಾಗಿದೆ.
ನ್ಯಾಯಾಲಯ ಮತ್ತು ಪಂಜಾಬ್- ಹರಿಯಾಣ ಸರ್ಕಾರಗಳು ರೈತರ ಸಮಸ್ಯೆಗಳ ಬಗ್ಗೆ ಕಳಕಳಿ ಹೊಂದಿವೆ. ಇವುಗಳ ಪರಿಹಾರಕ್ಕಾಗಿ ಒಂದು ವೇದಿಕೆ ರಚಿಸಲಾಗುವುದು ಎಂದು ನ್ಯಾಯಪೀಠ ಆಶ್ವಾಸನೆ ನೀಡಿದೆ.
ಶಂಭು ಗಡಿಯಲ್ಲಿ ಪ್ರತಿಭಟನೆ ಕೈಗೊಂಡಿರುವ ರೈತರ ಮನವೊಲಿಸಿ ಅಲ್ಲಿಂದ ಟ್ರ್ಯಾಕ್ಟರ್ ಮತ್ತು ಟ್ರಾಲಿಗಳ ತೆರವಿಗೆ ಕ್ರಮ ಕೈಗೊಳ್ಳಲು ಪಂಜಾಬ್- ಹರಿಯಾಣ ಸರ್ಕಾರಗಳಿಗೆ ನ್ಯಾಯಾಲಯ ಸೂಚನೆ ನೀಡಿದ್ದು, ಸೆಪ್ಟೆಂಬರ್ 2ಕ್ಕೆ ವಿಚಾರಣೆ ಮುಂದೂಡಿದೆ.