ನವದೆಹಲಿ: ವಿವಾದಿತ ಪೌರತ್ವ(ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ಬ್ಯಾಚ್ ಸೇರಿದಂತೆ 200 ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿಗಳನ್ನು ಸುಪ್ರೀಂ ಕೋರ್ಟ್ ನಾಳೆ ಸೋಮವಾರ ವಿಚಾರಣೆ ನಡೆಸಲಿದೆ ಎಂದು ವರದಿಯಾಗಿದೆ.
ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಸಿಎಎಯ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ.
ಸುಪ್ರೀಂ ಕೋರ್ಟ್ ವೆಬ್ ಸೈಟ್ ನಲ್ಲಿ ಅಪ್‌ಲೋಡ್ ಮಾಡಲಾದ ವ್ಯವಹಾರಗಳ ಪಟ್ಟಿಯ ಪ್ರಕಾರ, ಮುಖ್ಯ ನ್ಯಾಯಮೂರ್ತಿ ಮತ್ತು ನ್ಯಾಯಮೂರ್ತಿ ಎಸ್. ರವೀಂದ್ರ ಭಟ್ ಅವರನ್ನೊಳಗೊಂಡ ಪೀಠವು ಸಿಎಎ ವಿರುದ್ಧ ಇಂಡಿಯನ್ ಯೂನಿಯನ್ ಆಫ್ ಮುಸ್ಲಿಂ ಲೀಗ್‌ನ ಪ್ರಮುಖ ಮನವಿ ಸೇರಿದಂತೆ 220 ಅರ್ಜಿಗಳನ್ನು ವಿಚಾರಣೆಗೆ ಪೋಸ್ಟ್ ಮಾಡಿದೆ.
ಸುಪ್ರೀಂ ಕೋರ್ಟ್‌ನಲ್ಲಿ ಒಂದೆರಡು ವರ್ಷಗಳಿಂದ ಬಾಕಿ ಉಳಿದಿರುವ ಹಲವಾರು ಪಿಐಎಲ್‌ಗಳನ್ನು ಸಹ ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಹೇಳಲಾಗಿದೆ.