ಅಕ್ರಮ ಹಣ ವರ್ಗಾವಣೆ ಪ್ರಕರಣ (PMLA) ದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಯಾವುದೇ ವ್ಯಕ್ತಿಗೆ ಸಮನ್ಸ್ ನೀಡಲು ಅಥವಾ ಬಂಧನಕ್ಕೊಳಪಡಿಸಲು ಇರುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಈ ಸಂಬಂಧ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಂ. ಖಾನ್ವೀಲ್ಕರ್ ಅವರಿದ್ದ ನ್ಯಾಯಪೀಠ ಈ ಮಹತ್ವದ ಆದೇಶವನ್ನು ನೀಡಿದೆ.
ಜಾರಿ ನಿರ್ದೇಶನಾಲಯ ಉದ್ದೇಶಪೂರ್ವಕವಾಗಿ ಸಮನ್ಸ್ ನೀಡುತ್ತಿದೆ ಅಲ್ಲದೆ ಬಂಧನಕ್ಕೊಳಪಡಿಸಲಾಗುತ್ತಿದೆ. ಇದಕ್ಕೆ ತಡೆ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ವೇಳೆ ಈ ಆದೇಶ ಹೊರ ಬಿದ್ದಿದೆ.