ಜಮ್ಮು ಕಾಶ್ಮೀರದ 370 ನೇ ವಿಧಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರೊಳಗೊಂಡ ಸಂವಿಧಾನ ಪೀಠ ಈ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ನ್ಯಾಯಪೀಠವು 16 ದಿನಗಳ ವಿಚಾರಣೆಯ ನಂತರ ಸೆಪ್ಟೆಂಬರ್ 5 ರಂದು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತು. ಇಂದಿಗೆ ಕಾಯ್ದಿರಿಸಿದ್ದಂತ ತೀರ್ಪನ್ನು ಇದೀಗ ಪ್ರಕಟಿಸಿದೆ.ಜಮ್ಮು ಕಾಶ್ಮೀರದ 370 ನೇ ವಿಧಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಕೇಂದ್ರ ಸರ್ಕಾರದ ಈ ಕ್ರಮ ಸರಿಯಾಗಿದೆ. ಇದು ಸಂವಿಧಾನಬದ್ದವಾಗಿದೆ ಎಂದ ಸುಪ್ರೀಂಕೋರ್ಟ್ ಸೆ.30 ರೊಳಗೆ ಚುನಾವಣೆ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು (ಸೋಮವಾರ) ತೀರ್ಪು ನೀಡಿದೆ .ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ನೇತೃತ್ವದ ಪಂಚಸದಸ್ಯ ಪೀಠ ಈ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶವನ್ನು ಪ್ರಶ್ನೆ ಮಾಡಲು ಆಗಲ್ಲ, ಸಂಸತ್ ಮತ್ತು ರಾಷ್ಟ್ರಪತಿ ಈ ನಿರ್ಧಾರ ಕೈಗೊಳ್ಳಬಹುದಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದರು.
ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರು ನ್ಯಾಯಪೀಠದ ಇತರ ಸದಸ್ಯರು. 16 ದಿನಗಳ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5 ರಂದು ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು.ವಿಚಾರಣೆಯ ಸಮಯದಲ್ಲಿ, 370 ನೇ ವಿಧಿಯನ್ನು ರದ್ದುಪಡಿಸುವುದನ್ನು ಸಮರ್ಥಿಸುವವರು ಮತ್ತು ಕೇಂದ್ರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಿರಿಯ ವಕೀಲರಾದ ಹರೀಶ್ ಸಾಳ್ವೆ, ರಾಕೇಶ್ ದ್ವಿವೇದಿ, ವಿ ಗಿರಿ ಮತ್ತು ಇತರರು ಸಲ್ಲಿಸಿದ ವಾದಗಳನ್ನು ಸುಪ್ರೀಂ ಕೋರ್ಟ್ ಆಲಿಸಿತು.
ಅರ್ಜಿದಾರರನ್ನು ಹಿರಿಯ ವಕೀಲರಾದ ಕಪಿಲ್ ಸಿಬಲ್, ಗೋಪಾಲ್ ಸುಬ್ರಮಣಿಯಂ, ರಾಜೀವ್ ಧವನ್, ಜಾಫರ್ ಶಾ, ದುಶ್ಯಂತ್ ದವೆ ಮತ್ತು ಇತರರು ಪ್ರತಿನಿಧಿಸಿದ್ದರು.ಆಗಸ್ಟ್ 5, 2019 ರಂದು, ಕೇಂದ್ರವು ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಸಂವಿಧಾನದ 370 ನೇ ವಿಧಿಯನ್ನು ಹಿಂತೆಗೆದುಕೊಂಡಿತು ಮತ್ತು ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.
370 ನೇ ವಿಧಿಯನ್ನು ರದ್ದುಗೊಳಿಸಲು ಯಾರು ಶಿಫಾರಸು ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ನಿಯಮಗಳ ಅನುಸಾರ, ಸಂವಿಧಾನವು ತಾತ್ಕಾಲಿಕವಾಗಿ ಹೊಂದಿದ್ದ 370ನೇ ವಿಧಿಯನ್ನು ರದ್ದುಗೊಳಿಸಲು ಸಂವಿಧಾನ ಸಭೆಯ ಅನುಮೋದನೆಯ ಅಗತ್ಯವಿದೆ. ಸಂವಿಧಾನ ಸಭೆಯನ್ನು ವಿಸರ್ಜಿಸಿದ ನಂತರ ಈ ವಿಧಿ ಹೇಗೆ ಶಾಶ್ವತವಾಯಿತು ಎಂದು ನ್ಯಾಯಾಲಯವು ಪ್ರಶ್ನಿಸಿತ್ತು. ತೀರ್ಪಿಗೆ ಮುನ್ನ ಕಾಶ್ಮೀರದ ಕಣಿವೆಯಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸಬೇಕು ಎಂದು ಬಿಜೆಪಿ ಹೇಳಿತ್ತು.