alex Certify ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆಪ್ತನಿಂದಲೇ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆಪ್ತನಿಂದಲೇ ದೂರು

ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಸಲಿಂಗ ಕಾಮ ದೌರ್ಜನ್ಯದ ದೂರು ದಾಖಲಾಗಿದೆ. ಈ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

4 ದಿನಗಳ ಹಿಂದೆಯಷ್ಟೇ ಸೂರಜ್ ಪರವಾಗಿ ದೂರು ನೀಡಿದ್ದ ಶಿವಕುಮಾರ್ ಉಲ್ಟಾ ಹೊಡೆದಿದ್ದು, ಮೂರು ವರ್ಷದ ಹಿಂದೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೊಳೆನರಸೀಪುರ ಠಾಣೆಗೆ ದೂರು ನೀಡಿದ್ದಾರೆ.

ಜೂನ್ 21ರಂದು ಸೂರಜ್ ರೇವಣ್ಣ ಪರವಾಗಿ ದೂರು ನೀಡಿದ್ದ ಆಪ್ತ ಶಿವಕುಮಾರ್ ನಾಪತ್ತೆಯಾಗಿದ್ದರು. ಇದೀಗ ಉಲ್ಟಾ ಹೊಡೆದಿದ್ದು ಮೂರು ವರ್ಷಗಳ ಹಿಂದೆ ತನ್ನ ಮೇಲೆಯೂ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಈ ಮೂಲಕ ಸೂರಜ್ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...