ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿರುವ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣನನ್ನು ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.
ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಸೂರಜ್ ರೇವಣ್ಣನನ್ನು ಜುಲೈ 1ರವರೆಗೆ ಸಿಐಡಿ ಕಸ್ಟಡಿಗೆ ವಹಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.
ಸೂರಜ್ ರೇವಣ್ಣ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಯಲ್ಲಿ ಸಿಐಡಿ ಅಧಿಕಾರಿಗಳು ಸೂರಜ್ ಕಸ್ಟಡಿಗೆ ಕೇಳಿದ್ದು, ನ್ಯಾಯಾಲಯ ಸಿಐಡಿ ಕಸ್ಟಡಿಗೆ ವಹಿಸಿದೆ. ಈ ಹಿನ್ನೆಲೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸೂರಜ್ ವಿರುದ್ಧ ಸಿಐಡಿ ತನಿಖೆ ಚುರುಕುಗೊಳ್ಳಲಿದೆ.