ಬೆಂಗಳೂರು: ವಿಧಾನಪರಿಷತ್ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರಲ್ಲಿ ಟಿಕೆಟ್ ಗಾಗಿ ಲಾಬಿ ಆರಂಭವಾಗಿದೆ. ಈ ನಡುವೆ ಹಾಸನದಲ್ಲಿ ತಮ್ಮ ಕ್ಯಾನ್ ವಾಸ್ ವಿಸ್ತರಿಸುವ ನಿಟ್ಟಿನಲ್ಲಿ ಜೆಡಿಎಸ್ ಹೊಸ ತಂತ್ರ ರೂಪಿಸಿದ್ದು, ಗೌಡರ ಕುಟುಂಬದ ಮತ್ತೊಬ್ಬ ಕುಡಿ ರಾಜಕೀಯ ಪ್ರವೇಶ ಮಾಡುವ ಸಾಧ್ಯತೆ ದಟ್ಟವಾಗಿದೆ.
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಮಗ ರೇವಣ್ಣ ಅವರ ಜೇಷ್ಠ ಪುತ್ರ ಸೂರಜ್ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಪರಿಷತ್ ಚುನಾವಣೆ ಮೂಲಕ ಮೊಮ್ಮಗನನ್ನು ರಾಜಕೀಯ ರಂಗ ಪ್ರವೇಸಿಸಲು ದಳಪತಿ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.
BIG NEWS: ರೈತರ ವಿರೋಧದ ನಡುವೆಯೂ NH4 ರ ಬೈಪಾಸ್ ರಸ್ತೆ ಕಾಮಗಾರಿಗೆ ಮುಂದಾದ ಜಿಲ್ಲಾಡಳಿತ
ಸ್ಥಳೀಯ ಸಂಸ್ಥೆಯಿಂದ ಪರಿಷತ್ ಚುನಾವಣೆ ವಿಚಾರದಲ್ಲಿ ಇಂದು ಹಾಸನ ಅಭ್ಯರ್ಥಿ ಆಯ್ಕೆ ಸಂಬಂಧ ದೇವೇಗೌಡರು ಜಿಲ್ಲೆಯ ಶಾಸಕರ ಸಭೆ ಕರೆದಿದ್ದಾರೆ. ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಸಮರ್ಥ ಅಭ್ಯರ್ಥಿ ಇಲ್ಲದಿರುವ ಕಾರಣಕ್ಕೆ ಕುಟುಂಬದವರನ್ನೇ ಅಖಾಡಕ್ಕೆ ಇಳಿಸುವ ಬಗ್ಗೆ ದಳಪತಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.