
ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಬಂಧನ ಭೀತಿಯಲ್ಲಿದ್ದಾರೆ.
ಹಾಸನದ ಸಿಇಎನ್ ಠಾಣೆಯಲ್ಲಿ ಸೂರಜ್ ರೇವಣ್ಣ ಅವರ ವಿಚಾರಣೆ ನಡೆಸಲಾಗಿದೆ. ಹೊಳೆ ನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾದ ಬೆನ್ನಲ್ಲೇ ಸೂರಜ್ ರೇವಣ್ಣ ವಿಚಾರಣೆ ಎದುರಿಸುತ್ತಿದ್ದಾರೆ.
ಯುವಕನ ವಿರುದ್ಧ ಬ್ಲಾಕ್ ಮೇಲ್ ಆರೋಪದಲ್ಲಿ ನಿನ್ನೆ ಸೂರಜ್ ಆಪ್ತ ಶಿವಕುಮಾರ್ ನೀಡಿದ್ದ ದೂರಿನ ಅನ್ವಯ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ಸಂಬಂಧ ವಿಚಾರಣೆಗಾಗಿ ಸೂರಜ್ ರೇವಣ್ಣ ಸಿಇಎನ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಆಡಿಯೋ ರಿಕವರಿ, ಧ್ವನಿ ಮಾದರಿ ಸಂಗ್ರಹ ವಿಚಾರಣೆಗಾಗಿ ಸೂರಜ್ ರೇವಣ್ಣ ಪೊಲೀಸ್ ಠಾಣೆಗೆ ಹಾಜರಾಗಿದ್ದು, ವಿಚಾರಣೆ ಬಳಿಕ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.