
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಎಂಎಲ್ ಸಿ ಸೂರಜ್ ರೇವಣ್ಣ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿರುವ ಸೂರಜ್ ರೇವಣ್ಣ, ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಷಡ್ಯಂತ್ರ ನಡೆದಿದೆ. ನಮ್ಮ ವಿರುದ್ಧ ನಡೆದ ಕುತಂತ್ರವೆಲ್ಲವೂ ಮುಂದೆ ಬಯಲಾಗಲಿದೆ ಎಂದು ಹೇಳಿದರು.
ನಾನು ಯಾವುದಕ್ಕೂ ಹೆದರಿ ಓಡಿಹೋಗುವವನಲ್ಲ. ತನಿಖೆಗೆ ಸಹಕರಿಸುತ್ತೇನೆ. ನ್ಯಾಯಾಂಗದ ಮೇಲೆ ನನಗೆ ನಂಬಿಕೆ ಇದೆ. 2-3 ದಿನಗಳ ಬಳಿಕ ಎಲ್ಲಾ ಘಟನಾವಳಿಗಳ ಬಗ್ಗೆ ಸ್ಪಷ್ಟೀಕರಣ ನೀಡುತ್ತೇನೆ ಎಂದರು.