ಬೆಂಗಳೂರು : ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ಅಸಂಘಟಿತ ಕಾರ್ಮಿಕರು ಇ-ಶ್ರಮ ಪೋರ್ಟಲ್ ಮೂಲಕ ನೊಂದಾಯಿತವಾಗಿ ಅಪಘಾತಗೊಂಡ ಫಲಾನುಭವಿಗಳಿಗೆ 2 ಲಕ್ಷ ಅಪಘಾತ ಪರಿಹಾರಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.
ಫಲಾನುಭವಿಗಳು 26 ಆಗಸ್ಟ್ 2021 ರಿಂದ 31 ಮಾರ್ಚ್ 2022ರ ಒಳಗಾಗಿ ನೊಂದಾಯಿಸಿ ಅಪಘಾತಗೊಂಡವರಿಗೆ ಪರಿಹಾರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಅಪಘಾತದಿಂದ ಮರಣ ಹೊಂದಿದಲ್ಲಿ ಸಲ್ಲಿಸಬೇಕಾದ ದಾಖಲೆಗಳು: ಫಲಾನುಭವಿಯ ಆಧಾರ್ ಸಂಖ್ಯೆ, ಇ-ಶ್ರಮ್ ಕಾರ್ಡ್ ಸಂಖ್ಯೆ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಇಫ್.ಐ.ಆರ್ ಪ್ರತಿ ಹಾಗೂ ಅಪಘಾತದಿಂದ ಅಂಗವೈಕಲ್ಯ ಹೊಂದಿದ್ದಲ್ಲಿ ಸಲ್ಲಿಸಬೇಕಾದ ದಾಖಲೆಗಳು: ಫಲಾನುಭವಿಯ ಆಧಾರ್ ಸಂಖ್ಯೆ, ಇ-ಶ್ರಮ್ ಕಾರ್ಡ್ ಸಂಖ್ಯೆ, ಅಪಘಾತದಿಂದ ಉಂಟಾದ ಅಂಗವೈಕಲ್ಯವನ್ನು ಸೂಚಿಸುವ ಆಸ್ಪತ್ರೆ ದಾಖಲೆಗಳನ್ನು ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.