
ಮಂಗಳೂರು: ಫಿಶ್ ಮಿಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಘಟಕವೇ ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಸೂರತ್ಕಲ್ ನಲ್ಲಿ ನಡೆದಿದೆ.
ಮೀನು ಸಂಸ್ಕರನಾ ಘಟಕದಲ್ಲಿ ಈ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಫಿಶ್ ಮಿಲ್ ಧಗ ಧಗನೆ ಹೊತ್ತಿ ಉರಿದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.