
ಬೆಳಗಾವಿ: ಕೈಗಾರಿಕೆ ಸಚಿವ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಸೊಸೆ ಶ್ರದ್ಧಾ ಶೆಟ್ಟರ್ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಕೇಂದ್ರ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ಅವರ ಕಿರಿಯ ಪುತ್ರಿಯಾಗಿರುವ ಶ್ರದ್ಧಾ ಬಿಜೆಪಿಯಿಂದ ಬೆಳಗಾವಿ ಎಪಿಎಂಸಿ ಪ್ರಾಂಗಣದಲ್ಲಿ ಆಯೋಜಿಸಿದ್ದ ಕಿಸಾನ್ ಸಮ್ಮಾನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಶ್ರದ್ಧಾ ಅವರು ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಕ್ಕೆ ಮತ್ತು ಪಕ್ಷದವರೊಂದಿಗೆ ಬೆರೆತಿದ್ದಕ್ಕೆ ಖುಷಿಯಾಗಿದೆ ಎಂದು ತಿಳಿಸಿದ್ದು,. ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಸುರೇಶ್ ಅಂಗಡಿ ಕುಟುಂಬದವರಿಗೆ ಟಿಕೆಟ್ ನೀಡಬೇಕೆಂಬ ಅಭಿಪ್ರಾಯ ಕೇಳಿ ಬಂದಿದೆ. ಅನೇಕ ನಾಯಕರು ಕೂಡ ಸುರೇಶ್ ಅಂಗಡಿ ಕುಟುಂಬಕ್ಕೆ ಟಿಕೆಟ್ ನೀಡಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಇದೇ ಮೊದಲ ಬಾರಿಗೆ ಶ್ರದ್ಧಾ ಶೆಟ್ಟರ್ ಅವರು ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅವರು ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದೆ.