ಬೆಂಗಳೂರು: ಶಾಲಾ, ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. 2019 -20 ನೇ ಸಾಲಿನ ಪಾಸ್ ತೋರಿಸಿ ಮಾ. 31 ರವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಇನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶುಕ್ರವಾರ ವಿಧಾನಸೌಧದಲ್ಲಿ ಸಕಾಲ ಮತ್ತು ಸೇವಾ ಸಿಂಧು ಹಾಗೂ ಸಾರಿಗೆ ಸಂಸ್ಥೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ಪಡೆಯಲು ಆಗಿರುವ ತೊಂದರೆ ನಿವಾರಿಸಿ ಸಕಾಲದಲ್ಲಿ ಬಸ್ ಪಾಸ್ ವಿತರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಸೇವಾ ಸಿಂಧು ಪೋರ್ಟಲ್ ನಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎನ್ನುವ ದೂರುಗಳು ಬಂದಿವೆ. ಬಸ್ ಪಾಸ್ ಇಲ್ಲದೆ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಬಾರದು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಅರ್ಜಿ ಸಲ್ಲಿಕೆಯನ್ನು ಸರಳಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ.