alex Certify BIG NEWS: ಶೀಘ್ರವೇ ಶುರುವಾಗಲಿದೆ 1 -8 ನೇ ತರಗತಿ –ಸಚಿವ ಸುರೇಶ್ ಕುಮಾರ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶೀಘ್ರವೇ ಶುರುವಾಗಲಿದೆ 1 -8 ನೇ ತರಗತಿ –ಸಚಿವ ಸುರೇಶ್ ಕುಮಾರ್ ಮಾಹಿತಿ

ರಾಜ್ಯದಲ್ಲಿ ಒಂದರಿಂದ ಎಂಟನೇ ತರಗತಿಗಳನ್ನು ಶೀಘ್ರವೇ ಆರಂಭಿಸಲು ಚಿಂತನೆ ನಡೆಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಗೌರಿಬಿದನೂರು ತಾಲ್ಲೂಕಿನ ನಗರಗೆರೆ ಹೋಬಳಿ ನಂಜಯ್ಯಗಾರಿಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದ ಅವರು ಮಾತನಾಡಿ, ಒಂದರಿಂದ ಎಂಟನೇ ತರಗತಿಗಳನ್ನು ಆರಂಭಿಸುವ ಕುರಿತು ಫೆಬ್ರವರಿ 2ನೇ ವಾರ ಇಲ್ಲವೇ 3 ನೇ ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಆರೋಗ್ಯ ಇಲಾಖೆ ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ಒಂದರಿಂದ ಎಂಟನೇ ತರಗತಿಗಳನ್ನು ಪ್ರಾರಂಭಿಸುವ ಕುರಿತು ತೀರ್ಮಾನಿಸಲಾಗುವುದು. 9, 10 ಹಾಗೂ ಪಿಯುಸಿ ತರಗತಿಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿದ್ದು, ಶೇಕಡ 80 ರಷ್ಟು ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ. ಆರರಿಂದ ಎಂಟನೇ ತರಗತಿ ಮಕ್ಕಳಿಗೆ ವಿದ್ಯಾಗಮ ಕಲಿಕೆ ಮುಂದುವರೆದಿದೆ ಎಂದು ಸಚಿವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...