ಬೆಂಗಳೂರು: 1 ರಿಂದ 9 ನೇ ತರಗತಿ ಮಕ್ಕಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲು ರಾಜ್ಯಸರ್ಕಾರ ಚಿಂತನೆ ನಡೆಸಿದೆ. ಮೌಲ್ಯಾಂಕನ ಪರೀಕ್ಷೆ ರದ್ದು ಮಾಡಲು ಚಿಂತಿಸಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ ಎಂದು ಹೇಳಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್. ಸುರೇಶ್ ಕುಮಾರ್ ಒಂದರಿಂದ ಎರಡು ದಿನದೊಳಗೆ 1 ರಿಂದ 9ನೇ ತರಗತಿ ಮಕ್ಕಳ ಪರೀಕ್ಷೆ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೆ ಸಮಯವಿದೆ ಎಂದು ಹೇಳಿದ್ದಾರೆ.