ಬೆಂಗಳೂರು: ರಾಜ್ಯದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ಕುರಿತಾಗಿ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಸೋಮವಾರ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಬೇಕೆ ಬೇಡವೇ ಎಂಬುದರ ಬಗ್ಗೆ ಚರ್ಚೆ ನಡೆಯಲಿದೆ. ಶಿಕ್ಷಣ ತಜ್ಞರು, ಖಾಸಗಿ ಶಾಲೆ ಸಂಘಟನೆಗಳ ಪ್ರಮುಖರು, ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದು, 1 ರಿಂದ 9 ನೇ ತರಗತಿಯ ಮಕ್ಕಳಿಗೆ ಪರೀಕ್ಷೆಯ ನಡೆಸಬೇಕೇ? ಬೇಡವೇ? ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಲಿಖಿತ ಪರೀಕ್ಷೆಯ ಬದಲಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಿ ಮುಂದಿನ ತರಗತಿಗೆ ಪಾಸ್ ಮಾಡುವ ಚಿಂತನೆ ಇದ್ದು ನಾಳಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.