ಬೆಂಗಳೂರು: ರಾಜಾಜಿನಗರ ಬಿಜೆಪಿ ಶಾಸಕ, ಮಾಜಿ ಸಚಿವ ಸುರೇಶ್ ಕುಮಾರ್ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಲ್ಕು ದಿನಗಳಿಂದ ಸುರೇಶ್ ಕುಮಾರ್ ಚಿಕೂನ್ ಗುನ್ಯಾ ಮತ್ತು ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ.
ಇತ್ತೀಚೆಗೆ ಸುರೇಶ್ ಕುಮಾರ್ ಹೆಚ್ಚು ಸೈಕಲಿಂಗ್ ಮಾಡುತ್ತಿದ್ದರು. ನಾಲ್ಕೂವರೆ ಲಕ್ಷ ರೂ. 4 ಇಂಜೆಕ್ಷನ್ ಗಳನ್ನು ಸುರೇಶ್ ಕುಮಾರ್ ಪಡೆದುಕೊಂಡಿದ್ದಾರೆ. ಇನ್ನು 7 ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿದೆ.