ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಹೈಸ್ಪೀಡ್ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು. ಎಲ್ಲ ಸರ್ಕಾರಿ ಶಾಲೆಗಳಿಗೆ ತಂತ್ರಜ್ಞಾನ ಸ್ಪರ್ಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಭಾರತ್ ನೆಟ್ ಸಹಯೋಗದಲ್ಲಿ ಮೊದಲ ಹಂತದಲ್ಲಿ ಕ್ಲಸ್ಟರ್ ಮಟ್ಟದಲ್ಲಿ ಸರ್ಕಾರಿ ಶಾಲೆಗಳಿಗೆ ಹೈಸ್ಪೀಡ್ ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕೇಬಲ್ ಮೂಲಕ ಹೈಸ್ಪೀಡ್ ಇಂಟರ್ನೆಟ್ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ತಂತ್ರಜ್ಞಾನ ಆಧಾರಿತ ಕಲಿಕೆಗೆ ವಿಶೇಷ ಒತ್ತು ನೀಡುವುದು ಅನಿವಾರ್ಯವಾಗಿದ್ದು, ಮೊದಲ ಹಂತದಲ್ಲಿ ಕ್ಲಸ್ಟರ್ ಮಟ್ಟದಲ್ಲಿ ಯೋಜನೆ ಜಾರಿಯಾಗಲಿದೆ. ಕೋವಿಡ್ ಕಾರಣದಿಂದ ಸಾಮಾಜಿಕ ಸ್ಥಿತಿಗತಿಗಳಿಗೆ ಅನುಗುಣವಾಗಿ ತಂತ್ರಜ್ಞಾನ ಆಧಾರಿತ ಕಲಿಕೆಗೆ ವಿಶೇಷ ಒತ್ತು ನೀಡುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಶಾಲೆಗಳಿಗೆ ಹೈಸ್ಪೀಡ್ ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.