alex Certify ಶೈಕ್ಷಣಿಕ ವರ್ಷಾರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೈಕ್ಷಣಿಕ ವರ್ಷಾರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಮಾಹಿತಿ

ತುಮಕೂರು: ಮುಂದಿನ ಶೈಕ್ಷಣಿಕ ವರ್ಷ ಜುಲೈ 15 ರಿಂದ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಎರಡನ್ನು ಗಮನಿಸಬೇಕಿರುವುದರಿಂದ ಸದ್ಯಕ್ಕೆ ಒಂದರಿಂದ ಐದನೇ ತರಗತಿ ಆರಂಭಿಸದಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರದ ಸೂಚನೆ ನಡುವೆಯೂ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಒಂದರಿಂದ ಐದನೇ ತರಗತಿ ಆರಂಭಿಸಿದ ದೂರುಗಳು ಕೇಳಿಬಂದಿದ್ದು, ಈ ಬಗ್ಗೆ ಕ್ರಮಕೈಗೊಳ್ಳಲಾಗುವುದು. ಮಾರ್ಚ್ 1 ರಿಂದ ಐದನೇ ತರಗತಿ ಆರಂಭಿಸುವ ಚಿಂತನೆ ಇತ್ತು. ಆದರೆ, ರಾಜ್ಯದಲ್ಲಿ ಕೊರೋನಾ ಸೋಂಕು ಏರಿಕೆಯಾದ ಹಿನ್ನೆಲೆಯಲ್ಲಿ ಸದ್ಯಕ್ಕೆ ತರಗತಿಗಳನ್ನು ಆರಂಭಿಸದಿರಲು ನಿರ್ಧರಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷ ಜುಲೈ 15 ರಿಂದ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...