ಬೆಂಗಳೂರು: ರಾಜ್ಯದಲ್ಲಿ 1 –8 ನೇ ತರಗತಿಗಳ ಆರಂಭಕ್ಕೆ ಫೆಬ್ರವರಿ 16 ರಂದು ಸಭೆ ನಡೆಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಫೆ. 16 ರಂದು ಸಭೆ ಕರೆದಿದ್ದಾರೆ.
ಈ ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕೂಡ ಭಾಗಿಯಾಗಲಿದ್ದಾರೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚಿಸಿ ಶಾಲೆಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
SSLC ಪರೀಕ್ಷೆ ವೇಳಾಪಟ್ಟಿ:
ಶೀಘ್ರದಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು. ತಾತ್ಕಾಲಿಕ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಇನ್ನು ಸಮಯವಿದ್ದು, ಅವಧಿ ಮುಗಿದ ಕೂಡಲೇ ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.