alex Certify BIG BREAKING: ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ, ಶೀಘ್ರವೇ ರಿಸಲ್ಟ್ – ಪರೀಕ್ಷೆಗೂ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ, ಶೀಘ್ರವೇ ರಿಸಲ್ಟ್ – ಪರೀಕ್ಷೆಗೂ ಅವಕಾಶ

ಬೆಂಗಳೂರು: ಕೋವಿಡ್-19 ಸೋಂಕು ಪ್ರಸರಣದಿಂದಾಗಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳನ್ನು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಎಸ್.ಎಸ್.ಎಲ್.ಸಿ.ಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಅತಿ ಶೀಘ್ರದಲ್ಲಿ ಫಲಿತಾಂಶಗಳನ್ನು ಘೋಷಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಅಧಿಕೃತ ಸರ್ಕಾರದ ಆದೇಶ ಪ್ರಕಟಣೆಗೆ ಕ್ರಮ ವಹಿಸಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಮಾರ್ಗದರ್ಶಿ ಸೂತ್ರಗಳನ್ನು ರಚಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರತಿಭೆಗೆ ಅನುಗುಣವಾಗಿ ಫಲಿತಾಂಶಗಳನ್ನು ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಂದು ವೇಳೆ ಘೋಷಿತ ಫಲಿತಾಂಶದಿಂದ ಪಡೆದ ಅಂಕಗಳು ತೃಪ್ತಿಕರವೆನಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಮುಂದಿನ ದಿನಗಳಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ತೆಗೆದುಕೊಳ್ಳುವ ಖಾಸಗಿ ಅಭ್ಯರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಿ ಫಲಿತಾಂಶ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...