ಬೆಂಗಳೂರು: ರಾಜ್ಯದಲ್ಲಿ 1 -5 ನೇ ತರಗತಿ ಆರಂಭಿಸಲು ಅನುಮತಿ ನೀಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ನಿಯಮ ಮೀರಿ ಒಂದರಿಂದ ಐದನೇ ತರಗತಿ ಆರಂಭಿಸಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ, ರಾಜ್ಯದಲ್ಲಿ 1 -5 ನೇ ತರಗತಿ ಆರಂಭಿಸಲು ಅನುಮತಿ ನೀಡಿಲ್ಲ. ನಿಯಮ ಮೀರಿ ಕೆಲವೆಡೆ ಶಾಲೆ ಆರಂಭಿಸಿದ ಬಗ್ಗೆ ದೂರುಗಳು ಬಂದಿದ್ದು, ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನಿಯಮ ಮೀರಿ ಶಾಲೆ ಆರಂಭಿಸಿದವ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ತಿಳಿಸಲಾಗಿದೆ. ರಾಜ್ಯದಲ್ಲಿ 6 ನೇ ತರಗತಿ ಮೇಲ್ಪಟ್ಟ ಮಕ್ಕಳಿಗೆ ತರಗತಿ ನಡೆದಿವೆ. 1 -5 ನೇ ತರಗತಿ ಇನ್ನೂ ಆರಂಭಿಸಿಲ್ಲ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿತ್ತು. ಆದರೆ, ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ಸದ್ಯಕ್ಕೆ 1 -5 ನೇ ತರಗತಿ ಆರಂಭಿಸುವ ಸಾಧ್ಯತೆ ಇಲ್ಲವೆನ್ನಲಾಗಿದೆ.