
ಚಾಮರಾಜನಗರ: ದೂರದರ್ಶನ, ಆನ್ಲೈನ್ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಲಾಗುವುದು ಚಾಮರಾಜನಗರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಜುಲೈ 1 ರಿಂದ ತರಗತಿಗಳು ಆರಂಭವಾಗಲಿವೆ. ಶಾಲೆಯಲ್ಲಿ ತರಗತಿಗಳು ನಡೆಯುವುದಿಲ್ಲ. ಆನ್ಲೈನ್ನಲ್ಲಿ ಮಾತ್ರ ತರಗತಿಗಳು ನಡೆಯಲಿವೆ. ಸರ್ಕಾರದ ಮಾರ್ಗಸೂಚಿ ಪಡೆದು ಶಾಲೆಗಳನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಕೊರೋನಾ ಕಾರಣದಿಂದ ಸರ್ಕಾರಿ ಶಾಲೆಗೆ ಹೆಚ್ಚು ಮಕ್ಕಳು ಸೇರ್ಪಡೆಯಾಗಿದ್ದಾರೆ. ಕಳೆದ ವರ್ಷ 1.5 ಲಕ್ಷ ಮಕ್ಕಳು ಹೆಚ್ಚಾಗಿ ಸೇರ್ಪಡೆಯಾಗಿದ್ದಾರೆ. ಈ ಸಲವೂ ಹೆಚ್ಚು ಮಕ್ಕಳು ಸರ್ಕಾರಿ ಶಾಲೆಗೆ ಸೇರುವ ಸಾಧ್ಯತೆ ಇದೆ ಎಂದು ಸಚಿವರು ಹೇಳಿದ್ದಾರೆ.