alex Certify 2239 ವಿದ್ಯಾರ್ಥಿಗಳಿಗೆ 600 ಕ್ಕೆ 600 ಅಂಕ: ಪರೀಕ್ಷೆಗೆ ನೋಂದಾಯಿಸಲು ಜು. 30 ರಂದು ಕೊನೆ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2239 ವಿದ್ಯಾರ್ಥಿಗಳಿಗೆ 600 ಕ್ಕೆ 600 ಅಂಕ: ಪರೀಕ್ಷೆಗೆ ನೋಂದಾಯಿಸಲು ಜು. 30 ರಂದು ಕೊನೆ ದಿನ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉತ್ತೀರ್ಣರಾದ ಎಲ್ಲರಿಗೂ ಪದವಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದ ಎಲ್ಲ 32 ಶೈಕ್ಷಣಿಕ ಜಿಲ್ಲೆಗಳ ಹಲವಾರು ಪದವಿ ಪೂರ್ವ ಕಾಲೇಜುಗಳ ಮಕ್ಕಳು 600ಕ್ಕೆ 600 ಅಂಕಗಳನ್ನು ಪಡೆದಿದ್ದಾರೆ. ಒಟ್ಟು 2239 ಫ್ರೆಶ್ ವಿದ್ಯಾರ್ಥಿಗಳು ಪೂರ್ಣ ಅಂಕ ದಾಖಲಿಸಿದ್ದಾರೆ ಎಂದು ಸಚಿವರು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ 445, ಬೆಂಗಳೂರು ದಕ್ಷಿಣ-302, ಬೆಂಗಳೂರು ಉತ್ತರ-261, ಉಡುಪಿ-149, ಕೊಡಗು-04, ರಾಯಚೂರು/ಚಿಕ್ಕೋಡಿ-07, ಚಾಮರಾಜನಗರ-03, ಯಾದಗಿರಿ ಜಿಲ್ಲೆ-02 ಮಕ್ಕಳು ಪೂಣ೵ ಅಂಕಗಳನ್ನು ಗಳಿಸಿದ್ದಾರೆ.

ಆಗಸ್ಟ್ ನಲ್ಲಿ ವಾರ್ಷಿಕ ಪರೀಕ್ಷೆ:

ಈ ಬಾರಿಯ ದ್ವಿತೀಯ ಪಿಯು ಫಲಿತಾಂಶವನ್ನು ಒಪ್ಪಿಕೊಳ್ಳಲು ಇಲ್ಲವೇ ತಿರಸ್ಕರಿಸಲು ಈ ಬಾರಿಯ ಪರೀಕ್ಷೆಗೆ ನೋಂದಾಯಿಸಿದ್ದ ಫ್ರೆಷರ್ಸ್ ಮತ್ತು ರಿಪೀಟರ್ಸ್ ಅಭ್ಯ‌ರ್ಥಿಗಳಿಗೆ ಅವಕಾಶವಿದ್ದು, ವಾರ್ಷಿಕ ಪರೀಕ್ಷೆಗೆ ಹಾಜರಾಗಲು ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಅದರಂತೆ ಈ ಬಾರಿಯ ಪರೀಕ್ಷೆಗೆ ನೊಂದಾಯಿಸಿ ಪರೀಕ್ಷೆಗೆ ಹಾಜರಾಗಿ ಈ ಫಲಿತಾಂಶ ತಿರಸ್ಕರಿಸುವ ಹೊಸ ವಿದ್ಯಾರ್ಥಿಗಳಿಗೆ (ಫ್ರೆಷರ್ಸ್) ಮತ್ತು ಪುನರಾವರ್ತಿತ (ರಿಪೀಟರ್ಸ್) ಅಭ್ಯ‌ರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಯಲಿದೆ.

ಈ ಎರಡು ವರ್ಗದ ಅಭ್ಯರ್ಥಿಗಳು ಫಲಿತಾಂಶ ತಿರಸ್ಕರಿಸಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಜುಲೈ 30 ರಂದು ಕೊನೆ ದಿನವಾಗಿದೆ.

ಹಾಗೆಯೇ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದ ಖಾಸಗಿ(ಪ್ರೈವೇಟ್) ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಬೇಕಿದೆ. ಈ ಖಾಸಗಿ ಅಭ್ಯರ್ಥಿಗಳು ಈಗಾಗಲೇ ಪರೀಕ್ಷೆಗೆ ನೋಂದಾಯಿಸಿಕೊಂಡಿರುವುದರಿಂದ ಅವರು ಮತ್ತೆ ಪರೀಕ್ಷೆಗೆ ನೊಂದಾಯಿಸಬೇಕಾದ ಅಗತ್ಯವಿಲ್ಲ.

ಈ ಮೂರು ವರ್ಗದ ಅಭ್ಯರ್ಥಿಗಳಿಗೆ ಆಗಸ್ಟ್ ತಿಂಗಳ ಉತ್ತರಾರ್ಧದಲ್ಲಿ ಪರೀಕ್ಷೆ ನಡೆಸಲಾಗುವುದು. ಆಗಸ್ಟ್‍ ನಲ್ಲಿ ನಡೆಯುವ ಪರೀಕ್ಷೆ ಸಹ ವಾರ್ಷಿಕ ಪರೀಕ್ಷೆಯೇ ಆಗಿರುತ್ತದೆ. ಈ ಬಾರಿಯ ಫಲಿತಾಂಶ ತಿರಸ್ಕರಿಸಿ ಆಗಸ್ಟ್‍ ನಲ್ಲಿ ಪರೀಕ್ಷೆಗೆ ಹಾಜರಾಗುವ ಫ್ರೆಷರ್ ಅಭ್ಯರ್ಥಿಗಳನ್ನು ಫ್ರೆಷರ್ ಎಂದೇ ಪರಿಗಣಿಸಲಾಗುವುದು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆಗಸ್ಟ್ 19 ರಿಂದ ಸೆಪ್ಟೆಂಬರ್ 3 ರವರೆಗೆ ನಡೆಯಲಿವೆ ಎಂದು ಸಚಿವರು ಪರೀಕ್ಷೆಯ ವಿವರ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...