ಬೆಂಗಳೂರು: ಶಿಕ್ಷಣ ಸಂಸ್ಥೆಗಳ ಖಾಲಿ ಹುದ್ದೆ ಭರ್ತಿಗೆ ಸಮ್ಮತಿಸಲಾಗಿದೆ. ಹೀಗಾಗಿ ಸಿಎಂಗೆ ಸಚಿವ ಸುರೇಶ್ ಕುಮಾರ್ ಧನ್ಯವಾದ ಹೇಳಿದ್ದಾರೆ.
ಆರ್ಥಿಕ ಇಲಾಖೆಯ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ಪರಿಶೀಲಿಸಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ವ್ಯಾಪ್ತಿಯ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
2015 ರ ಡಿಸೆಂಬರ್ 31 ಕ್ಕೆ ಅಂತ್ಯವಾದಂತೆ ನಿವೃತ್ತಿ, ಮರಣ, ರಾಜೀನಾಮೆ ಮೊದಲಾದ ಕಾರಣಗಳಿಂದ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುವುದು. ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ನೇಮಕಾತಿಗೆ ಆರ್ಥಿಕ ಇಲಾಖೆ ಸಮ್ಮಿಸಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
2015 ರ ಡಿಸೆಂಬರ್ 31 ರ ಅಂತ್ಯಕ್ಕೆ ಖಾಲಿಯಾದ ಹುದ್ದೆಗಳ ಪೈಕಿ ಈಗಾಗಲೇ ಸರ್ಕಾರದಿಂದ ಅನುಮೋದನೆಗೊಂಡ ಹುದ್ದೆಗಳಿಗೆ 2021 – 22 ನೇ ಶೈಕ್ಷಣಿಕ ಸಾಲಿನಿಂದ ಅಂದರೆ ಜೂನ್ ಅಥವಾ ಜುಲೈ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆ ಸಹಮತ ನೀಡಿದೆ ಎಂದು ಹೇಳಲಾಗಿದೆ.