alex Certify ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಕೋವಿಡ್-19 ಸೋಂಕು ಪ್ರಸರಣದ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದ ಪುನರಾವರ್ತಿತ ಅಭ್ಯರ್ಥಿಗಳನ್ನು ಉತ್ತೀರ್ಣಗೊಳಿಸಲು ಇಲಾಖೆ ನಿರ್ಧರಿಸಿದೆ ಎಂದು ಸಚಿವ ಸುರೇಶ್ ಕುಮಾರ್  ತಿಳಿಸಿದ್ದಾರೆ.

ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕನಿಷ್ಠ ಉತ್ತೀರ್ಣ ಅಂಕಗಳನ್ನು ಮತ್ತು ಶೇ. 5ರಷ್ಟು ಕೃಪಾಂಕಗಳನ್ನು ನೀಡಿ ಫಲಿತಾಂಶ ಘೋಷಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್-19 ಸೋಂಕು ಪ್ರಸರಣದ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ನಿರ್ಧಾರ ಕೈಗೊಂಡಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಪುನರಾವರ್ತಿತ ಅಭ್ಯರ್ಥಿಗಳನ್ನೂ ಸಹ ಉತ್ತೀರ್ಣಗೊಳಿಸಬೇಕೆಂದು ಕೆಲವರು ರಾಜ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಪುನರಾವರ್ತಿತ ಅಭ್ಯರ್ಥಿಗಳನ್ನೂ ಈ ವರ್ಷದ ಮಟ್ಟಿಗೆ ಉತ್ತೀರ್ಣಗೊಳಿಸುವ ಸರ್ಕಾರದ ನಿರ್ಧಾರವನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದು, ಸರ್ಕಾರದ ನಿಲುವನ್ನು ಹೈಕೋರ್ಟ್ ಸಮ್ಮತಿಸಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...