ಆರರಿಂದ ಎಂಟನೇ ತರಗತಿಗಳನ್ನು ಪೂರ್ಣಪ್ರಮಾಣದಲ್ಲಿ ಆರಂಭಿಸಲು ಚಿಂತನೆ ನಡೆದಿದೆ. ಶಾಲೆ ಪುನಾರಂಭ ಕುರಿತಂತೆ ಇಂದು ಮಹತ್ವದ ಸಭೆ ನಡೆಯಲಿದೆ. ಒಂದರಿಂದ ಐದನೇ ತರಗತಿಗೆ ವಿದ್ಯಾಗಮ ಕಲಿಕೆ ಪ್ರಾರಂಭಿಸಲಾಗುವುದು ಎಂದು ಹೇಳಲಾಗಿದೆ.
ರಾಜ್ಯದಲ್ಲಿ 9. 10 ಮತ್ತು ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿವೆ. ಆರರಿಂದ ಎಂಟನೇ ತರಗತಿಗಳನ್ನು ಕೂಡ ಪೂರ್ಣಪ್ರಮಾಣದಲ್ಲಿ ಆರಂಭಿಸುವ ಕುರಿತು ಇಂದು ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಆರರಿಂದ ಎಂಟನೇ ತರಗತಿಗಳನ್ನು ಪೂರ್ಣಪ್ರಮಾಣದಲ್ಲಿ ಆರಂಭಿಸಲು ಮತ್ತು ಒಂದರಿಂದ ಐದನೇ ತರಗತಿಗಳಿಗೆ ವಿದ್ಯಾ ಗಮ ಕಲಿಕೆ ಆರಂಭಿಸುವಂತೆ ಶಿಕ್ಷಣ ಇಲಾಖೆಗೆ ಪೋಷಕರು ಒತ್ತಾಯ ಮಾಡಿದ್ದು ಈ ಕುರಿತು ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.