ಬೆಂಗಳೂರು: ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಮುಂದಿನ ಎರಡು ವರ್ಷಗಳಲ್ಲಿ 20 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದ್ದು, ಈ ಬಗ್ಗೆ ಮಾತನಾಡಿ, ಮುಂದಿನ ಎರಡು ವರ್ಷಗಳಲ್ಲಿ 20 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪಿಯು ಉಪನ್ಯಾಸಕರಿಗೆ ಮುಂಬಡ್ತಿ ನೀಡಲಾಗಿದೆ. ಶಿಕ್ಷಕ ಮಿತ್ರ ಆಪ್ ಮೂಲಕ ಶಿಕ್ಷಕರ ಸಮಸ್ಯೆಗಳ ನಿವಾರಣೆ ಮಾಡಲಾಗ್ತಿದೆ ಎಂದು ಹೇಳಲಾಗಿದೆ.