ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಹಾಗೂ ವಿದ್ಯಾಗಮ ಕಲಿಕೆ ನಿನ್ನೆಯಿಂದ ಶುರುವಾಗಿದೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗೆ ಸೀಮಿತವಾಗಿ ಪಠ್ಯಕಡಿತ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಮಂಗಳವಾರ ಅಥವಾ ಬುಧವಾರ ಪಠ್ಯ ಕಡಿತದ ಬಗ್ಗೆ ಮಾಹಿತಿ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿಗಳು ಪಠ್ಯಕಡಿತದ ಬಗ್ಗೆ ಪ್ರಸ್ತಾವನೆ ಸಿದ್ಧಪಡಿಸಿದ್ದು, ಪಠ್ಯ ಕಡಿತ ಬಗ್ಗೆ ಮಾಹಿತಿ ಪ್ರಕಟಿಸಲಾಗುವುದು. ಅದೇ ರೀತಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕೂಡ ಇದೇ ಸಂದರ್ಭದಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.