ಬೆಂಗಳೂರು: ಯಾದಗಿರಿ ಜಿಲ್ಲೆ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸುರಪುರ ಕಾಂಗ್ರೆಸ್ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರಿಗೆ 67 ವರ್ಷ ವಯಸ್ಸಾಗಿತ್ತು. ಹೃದಯಘಾತವಾದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅವರು ಅಧಿಕಾರ ವಹಿಸಿಕೊಂಡಿದ್ದರು. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಾಜ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಾಂಗ್ರೆಸ್ ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದಾರೆ.
ನಾಳೆ ಸಕಲ ಸರ್ಕಾರಿ ಗೌರವದೊಂದಿಗೆ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.