ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳ ತಂಡ ಬಂಧಿಸಿದೆ.
ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದ ಬೆನ್ನಲ್ಲೇ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳ ತಂಡ ಬಂಧಿಸಿದೆ.
ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಕೂಡ ಎಸ್ಐಟಿ ಎದುರು ಶರಣಾಗುವ ಸಾಧ್ಯತೆ ಇದೆ. ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಎಸ್ಐಟಿ ಎದುರು ಶರಣಾಗಲಿದ್ದಾರೆ ಎನ್ನಲಾಗಿದೆ.
ರೇವಣ್ಣ ಬಂಧನ ಬಳಿಕ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಅವರು, ಜಾಮೀನು ಅರ್ಜಿ ವಜಾಗೊಂಡ ನಂತರ ದೇವೇಗೌಡರ ಆಶೀರ್ವಾದ ಪಡೆದು ಎಸ್ಐಟಿ ಮುಂದೆ ರೇವಣ್ಣ ಸರೆಂಡರ್ ಆಗಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ಕೂಡ ಸರೆಂಡರ್ ಆಗಲಿದ್ದಾರೆ ಎಂದು ಹೇಳಿದ್ದಾರೆ.